1 يَا أَيُّهَا النَّاسُ اتَّقُوا رَبَّكُمُ الَّذِي خَلَقَكُمْ مِنْ نَفْسٍ وَاحِدَةٍ وَخَلَقَ مِنْهَا زَوْجَهَا وَبَثَّ مِنْهُمَا رِجَالًا كَثِيرًا وَنِسَاءً ۚ وَاتَّقُوا اللَّهَ الَّذِي تَسَاءَلُونَ بِهِ وَالْأَرْ

ಜನರೇ, ನೀವು ನಿಮ್ಮ ಪಾಲಕ ಪ್ರಭುವನ್ನು ಭಯಪಡಿರಿ. ಅವನು ನಿಮ್ಮನ್ನು ಒಂದು ಜೀವದಿಂದ ಸೃಷ್ಟಿಸಿದನು. ಅದೇ ಜೀವದಿಂದ ಅದರ ಜೋಡಿಯನ್ನು ಉಂಟು ಮಾಡಿದನು ಮತ್ತು ಅವೆರಡರಿಂದ ಅನೇಕಾನೇಕ ಸ್ತ್ರೀ-ಪುರುಷರನ್ನು ಲೋಕದಲ್ಲಿ ಹಬ್ಬಿಸಿದನು. ನೀವು ಯಾರ ಹೆಸರನ್ನೆತ್ತಿ ಪರಸ್ಪರ ಹಕ್ಕು ಬಾಧ್ಯತೆಗಳನ್ನು ಕೇಳುತ್ತೀರೋ ಆ ಅಲ್ಲಾಹನನ್ನು ಭಯಪಡಿರಿ. ಕುಟುಂಬ ಸಂಬಂಧಗಳನ್ನು ಕೆಡಿಸಬೇಡಿರಿ. ಅಲ್ಲಾಹ್ ನಿಮ್ಮ ಮೇಲೆ ಮೇಲ್ನೋಟವನ್ನಿರಿಸಿ ಕೊಂಡಿರುವನೆಂಬುದನ್ನು ಚೆನ್ನಾಗಿ ಅರಿತುಕೊಳ್ಳಿರಿ.


2وَآتُوا الْيَتَامَىٰ أَمْوَالَهُمْ ۖ وَلَا تَتَبَدَّلُوا الْخَبِيثَ بِالطَّيِّبِ ۖ وَلَا تَأْكُلُوا أَمْوَالَهُمْ إِلَىٰ أَمْوَالِكُمْ ۚ إِنَّهُ كَانَ حُوبًا كَبِيرًا

ಅನಾಥರ ಸೊತ್ತುಗಳನ್ನು ಅವರಿಗೆ ಹಿಂದಿರುಗಿಸಿರಿ. ಒಳ್ಳೆಯ ಸೊತ್ತಿನ ಸ್ಥಾನದಲ್ಲಿ ಕೆಟ್ಟದನ್ನು ಬದಲಿಸಿಡಬೇಡಿರಿ. ಅವರ ಸೊತ್ತನ್ನು ನಿಮ್ಮದರೊಂದಿಗೆ ಸೇರಿಸಿ ಕಬಳಿಸಲೂಬೇಡಿರಿ. ಇದು ಅತ್ಯಂತ ಘೋರ ಪಾತಕ.


3وَإِنْ خِفْتُمْ أَلَّا تُقْسِطُوا فِي الْيَتَامَىٰ فَانْكِحُوا مَا طَابَ لَكُمْ مِنَ النِّسَاءِ مَثْنَىٰ وَثُلَاثَ وَرُبَاعَ ۖ فَإِنْ خِفْتُمْ أَلَّا تَعْدِلُوا فَوَاحِدَةً أَوْ مَا مَلَكَتْ أَيْمَانُكُمْ ۚ ذَٰلِكَ أَدْنَىٰ أَلَّا تَعُولُوا

ಅನಾಥರೊಂದಿಗೆ ನ್ಯಾಯವಾಗಿ ನಡೆದುಕೊಳ್ಳಲು ಸಾಧ್ಯವಾಗದೆಂಬ ಆಶಂಕೆ ನಿಮಗುಂಟಾದರೆ ಸ್ತ್ರೀಯರಲ್ಲಿ ನಿಮಗೆ ಮೆಚ್ಚಿದ ಇಬ್ಬರನ್ನೋ ಮೂವರನ್ನೋ ನಾಲ್ವರನ್ನೋ ವಿವಾಹ ಮಾಡಿಕೊಳ್ಳಿರಿ. ಆದರೆ ಅವರೊಂದಿಗೆ ನ್ಯಾಯಪಾಲಿಸ ಲಾರಿರೆಂಬ ಆಶಂಕೆ ನಿಮಗಿದ್ದರೆ ಒಬ್ಬ ಸ್ತ್ರೀಯನ್ನು ಮಾತ್ರ (ವಿವಾಹವಾಗಿರಿ) ಅಥವಾ ನಿಮ್ಮ ವಶಕ್ಕೆ ಬಂದ ಸ್ತ್ರೀಯರನ್ನು ಸ್ವೀಕರಿಸಿಕೊಳ್ಳಿರಿ. ಅನ್ಯಾಯದಿಂದ ತಪ್ಪಿಸಿಕೊಳ್ಳಲು ಇದು ಹೆಚ್ಚು ಉತ್ತಮ.


4وَآتُوا النِّسَاءَ صَدُقَاتِهِنَّ نِحْلَةً ۚ فَإِنْ طِبْنَ لَكُمْ عَنْ شَيْءٍ مِنْهُ نَفْسًا فَكُلُوهُ هَنِيئًا مَرِيئًا

ಸ್ತ್ರೀಯರಿಗೆ 'ವಿವಾಹಧನ'ವನ್ನು ಆತ್ಮ ಸಂತೋಷದಿಂದ (ಕಡ್ಡಾಯವೆಂದರಿತು) ಪಾವತಿ ಮಾಡಿರಿ. ಅವರು ತಮ್ಮಿಷ್ಟದಿಂದ ವಿವಾಹಧನದ ಒಂದಂಶವನ್ನು ನಿಮಗೆ ಬಿಟ್ಟು ಕೊಟ್ಟರೆ, ನೀವು ಅದನ್ನು ಸಂತೋಷದಿಂದ ಅನುಭೋಗಿಸಿಕೊಳ್ಳಬಹುದು.


5وَلَا تُؤْتُوا السُّفَهَاءَ أَمْوَالَكُمُ الَّتِي جَعَلَ اللَّهُ لَكُمْ قِيَامًا وَارْزُقُوهُمْ فِيهَا وَاكْسُوهُمْ وَقُولُوا لَهُمْ قَوْلًا مَعْرُوفًا

ಅಲ್ಲಾಹನು ನಿಮಗೆ ಜೀವನ ಸಾಧನವನ್ನಾಗಿ ನಿಶ್ಚಯಿಸಿರುವ ಸಂಪತ್ತನ್ನು ತಿಳಿಗೇಡಿಗಳ ವಶಕ್ಕೆ ಒಪ್ಪಿಸಬೇಡಿರಿ. ಆದರೆ ಅವರಿಗೆ ಉಣ್ಣಲಿಕ್ಕೂ, ಉಡಲಿಕ್ಕೂ ಕೊಡಿರಿ ಮತ್ತು ಅವರಿಗೆ ಸದ್ಬೋಧನೆ ಮಾಡಿರಿ.


6وَابْتَلُوا الْيَتَامَىٰ حَتَّىٰ إِذَا بَلَغُوا النِّكَاحَ فَإِنْ آنَسْتُمْ مِنْهُمْ رُشْدًا فَادْفَعُوا إِلَيْهِمْ أَمْوَالَهُمْ ۖ وَلَا تَأْكُلُوهَا إِسْرَافًا وَبِدَارًا أَنْ يَكْبَرُوا ۚ وَمَنْ كَانَ غَنِيًّا فَلْيَسْتَعْفِفْ ۖ وَمَنْ كَانَ فَقِي

ಅನಾಥರನ್ನು ಅವರು ವಿವಾಹಯೋಗ್ಯ ವಯಸ್ಸಿನವರಾಗುವವರೆಗೂ ಪರಿಶೀಲಿಸುತ್ತಲೇ ಇರಿ. ಅನಂತರ ಅವರಲ್ಲಿ ಯೋಗ್ಯತಾರ್ಹತೆಗಳನ್ನು ಕಂಡೊಡನೆ ಅವರ ಸಂಪತ್ತನ್ನು ಅವರ ವಶಕ್ಕೊಪ್ಪಿಸಿರಿ. ಅವರು ದೊಡ್ಡವರಾಗಿ ತಮ್ಮ ಹಕ್ಕನ್ನು ಕೇಳುವರೆಂದು ಹೆದರಿ, ನ್ಯಾಯದ ಮೇರೆಯನ್ನು ಮೀರಿ, ಅವರ ಸಂಪತ್ತನ್ನು ಲಗುಬಗೆಯಿಂದ ಕಬಳಿಸಬಾರದು. ಅನಾಥರ ರಕ್ಷಕನು ಧನಿಕನಾಗಿದ್ದರೆ ಅವನು ಸಂಯಮದಿಂದ ವರ್ತಿಸಲಿ ಮತ್ತು ಅವನು ಬಡವನಾಗಿದ್ದರೆ ನ್ಯಾಯೋಚಿತ ರೀತಿಯಿಂದ ತಿನ್ನಲಿ. ಅನಂತರ ಅವರ ಸಂಪತ್ತನ್ನು ಅವರಿಗೆ ಒಪ್ಪಿಸುವಾಗ ಜನರನ್ನು ಸಾಕ್ಷಿಯಾಗಿರಿಸಿಕೊಳ್ಳಿರಿ. ಲೆಕ್ಕಪರಿಶೋಧನೆ ನಡೆಸಲು ಅಲ್ಲಾಹನು ಸಾಕು.


7لِلرِّجَالِ نَصِيبٌ مِمَّا تَرَكَ الْوَالِدَانِ وَالْأَقْرَبُونَ وَلِلنِّسَاءِ نَصِيبٌ مِمَّا تَرَكَ الْوَالِدَانِ وَالْأَقْرَبُونَ مِمَّا قَلَّ مِنْهُ أَوْ كَثُرَ ۚ نَصِيبًا مَفْرُوضًا

ಮಾತಾಪಿತರೂ ಆಪ್ತ ಬಂಧುಗಳೂ ಬಿಟ್ಟು ಹೋದ ಸಂಪತ್ತಿನಲ್ಲಿ ಪುರುಷರಿಗೆ ಪಾಲಿದೆ. ಮಾತಾಪಿತರೂ ಆಪ್ತ ಬಂಧುಗಳೂ ಬಿಟ್ಟು ಹೋದ ಸಂಪತ್ತಿನಲ್ಲಿ ಸ್ತ್ರೀಯರಿಗೂ ಪಾಲಿದೆ. ಕಡಿಮೆ ಇರಲಿ ಅಥವಾ ಹೆಚ್ಚಿರಲಿ ಈ ಪಾಲು (ಅಲ್ಲಾಹನ ಕಡೆಯಿಂದ) ನಿಶ್ಚಿತವಾಗಿದೆ.


8وَإِذَا حَضَرَ الْقِسْمَةَ أُولُو الْقُرْبَىٰ وَالْيَتَامَىٰ وَالْمَسَاكِينُ فَارْزُقُوهُمْ مِنْهُ وَقُولُوا لَهُمْ قَوْلًا مَعْرُوفًا

ಪಾಲಾಗುವ ಸಂದರ್ಭದಲ್ಲಿ (ಹಕ್ಕುದಾರರಲ್ಲದ) ಸಂಬಂಧಿಕರು, ಅನಾಥರು ಮತ್ತು ನಿರ್ಗತಿಕರು ಬಂದರೆ ಅವರಿಗೂ ಏನಾದರೂ ಕೊಡಿರಿ. ಅವರೊಡನೆ ಸೌಜನ್ಯದ ಮಾತುಗಳನ್ನಾಡಿರಿ.


9وَلْيَخْشَ الَّذِينَ لَوْ تَرَكُوا مِنْ خَلْفِهِمْ ذُرِّيَّةً ضِعَافًا خَافُوا عَلَيْهِمْ فَلْيَتَّقُوا اللَّهَ وَلْيَقُولُوا قَوْلًا سَدِيدًا

ತಾವು ಸ್ವತಃ ಅಸಹಾಯಕ ಮಕ್ಕಳನ್ನು ಬಿಟ್ಟು ಮರಣ ಹೊಂದುತ್ತಿದ್ದರೆ ಆಗ ತಮ್ಮ ಮಕ್ಕಳ ಬಗೆಗೆ ತಮಗೆಷ್ಟು ಕಾಳಜಿಯುಂಟಾಗುತ್ತಿತ್ತೆಂಬುದನ್ನು ಎಣಿಸಿ ಕೊಂಡು ಜನರು ಭಯಪಡಬೇಕು. ಆದುದರಿಂದ ಅವರು ಅಲ್ಲಾಹನನ್ನು ಭಯಪಟ್ಟು ಸರಿಯಾದ ಮಾತನ್ನೇ ಆಡಲಿ.


10إِنَّ الَّذِينَ يَأْكُلُونَ أَمْوَالَ الْيَتَامَىٰ ظُلْمًا إِنَّمَا يَأْكُلُونَ فِي بُطُونِهِمْ نَارًا ۖ وَسَيَصْلَوْنَ سَعِيرًا

ಅನಾಥರ ಸೊತ್ತನ್ನು ಅಕ್ರಮವಾಗಿ ಕಬಳಿಸುವವರು ವಾಸ್ತವದಲ್ಲಿ ತಮ್ಮ ಹೊಟ್ಟೆಯನ್ನು ನರಕಾಗ್ನಿಯಿಂದ ತುಂಬುತ್ತಾರೆ ಮತ್ತು ನಿಶ್ಚಯವಾಗಿಯೂ ಅವರು ಜ್ವಲಿಸುವ ನರಕಾಗ್ನಿಯಲ್ಲಿ ತಳ್ಳಲ್ಪಡುವರು.