1 إِنَّا أَرْسَلْنَا نُوحًا إِلَىٰ قَوْمِهِ أَنْ أَنْذِرْ قَوْمَكَ مِنْ قَبْلِ أَنْ يَأْتِيَهُمْ عَذَابٌ أَلِيمٌ

ನಾವು ನೂಹರನ್ನು ಅವರ ಜನಾಂಗದ ಕಡೆಗೆ ರವಾನಿಸಿದೆವು. ಅವರು ತಮ್ಮ ಜನಾಂಗದವರಿಗೆ- ಅವರ ಮೇಲೆ ಒಂದು ವೇದ ನಾಯುಕ್ತ ಯಾತನೆ ಬಂದೆರಗುವುದಕ್ಕೆ ಮುಂಚೆಯೇ- ಎಚ್ಚರಿಕೆ ನೀಡಲೆಂದು.


2قَالَ يَا قَوْمِ إِنِّي لَكُمْ نَذِيرٌ مُبِينٌ

ಅವರು ಹೇಳಿದರು; "ನನ್ನ ಜನಾಂಗದವರೇ, ನಾನು ನಿಮಗಾಗಿ ಓರ್ವ ಸುಸ್ಪಷ್ಟ ಎಚ್ಚರಿಕೆ ಕೊಡುವವ(ಸಂದೇಶವಾಹಕ)ನಾಗಿದ್ದೇನೆ.


3أَنِ اعْبُدُوا اللَّهَ وَاتَّقُوهُ وَأَطِيعُونِ

ಅಲ್ಲಾಹನ ಆರಾಧನೆ ಮಾಡಿರಿ, ಅವನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.


4يَغْفِرْ لَكُمْ مِنْ ذُنُوبِكُمْ وَيُؤَخِّرْكُمْ إِلَىٰ أَجَلٍ مُسَمًّى ۚ إِنَّ أَجَلَ اللَّهِ إِذَا جَاءَ لَا يُؤَخَّرُ ۖ لَوْ كُنْتُمْ تَعْلَمُونَ

ಅಲ್ಲಾಹನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ನಿಮ್ಮನ್ನು ಒಂದು ನಿಶ್ಚಿತ ಕಾಲದ ವರೆಗೆ ಉಳಿಸುವನು. ವಾಸ್ತವದಲ್ಲಿ ಅಲ್ಲಾಹನು ನಿಶ್ಚಯಿಸಿರುವ ಕಾಲವು ಬಂದು ಬಿಟ್ಟರೆ ಮತ್ತೆ ಅದನ್ನು ಮುಂದೂಡಲಾಗುವುದಿಲ್ಲ. ಅಯ್ಯೋ ನಿಮಗಿದು ತಿಳಿದಿರುತ್ತಿದ್ದರೆ!"


5قَالَ رَبِّ إِنِّي دَعَوْتُ قَوْمِي لَيْلًا وَنَهَارًا

ಅವರು ಹೀಗೆ ಬಿನ್ನವಿಸಿದರು- "ನನ್ನ ಪ್ರಭೂ, ನಾನು ನನ್ನ ಜನಾಂಗದವರನ್ನು ಹಗಲಿರುಳೆನ್ನದೆ ಕರೆದೆನು.


6فَلَمْ يَزِدْهُمْ دُعَائِي إِلَّا فِرَارًا

ಆದರೆ ನನ್ನ ಕರೆಯು ಅವರ ಪಲಾಯನವನ್ನು ಮಾತ್ರ ಹೆಚ್ಚಿಸಿತು.


7وَإِنِّي كُلَّمَا دَعَوْتُهُمْ لِتَغْفِرَ لَهُمْ جَعَلُوا أَصَابِعَهُمْ فِي آذَانِهِمْ وَاسْتَغْشَوْا ثِيَابَهُمْ وَأَصَرُّوا وَاسْتَكْبَرُوا اسْتِكْبَارًا

ನೀನು ಅವರನ್ನು ಕ್ಷಮಿಸುವಂತಾಗಲೆಂದು ನಾನು ಅವರನ್ನು ಕರೆದಾಗಲೆಲ್ಲ ಅವರು ಕಿವಿಗಳಲ್ಲಿ ಬೆರಳುಗಳನ್ನು ತುರುಕಿಸಿ ಕೊಂಡರು, ತಮ್ಮ ವಸ್ತ್ರಗಳಿಂದ ಮುಖಮುಚ್ಚಿ ಕೊಂಡರು, ಹಠಮಾರಿತನ ತೋರಿದರು ಮತ್ತು ಭಾರೀ ಅಹಂಭಾವ ತೋರಿಸಿದರು.


8ثُمَّ إِنِّي دَعَوْتُهُمْ جِهَارًا

ತರುವಾಯ ನಾನು ಅವರಿಗೆ ಬಹಿರಂಗವಾಗಿ ಕರೆ ಕೊಟ್ಟೆನು,


9ثُمَّ إِنِّي أَعْلَنْتُ لَهُمْ وَأَسْرَرْتُ لَهُمْ إِسْرَارًا

ಅನಂತರ ನಾನು ಘಂಟಾಘೋಷವಾಗಿ ಧರ್ಮಾಹ್ವಾನ ನೀಡಿದೆನು ಮತ್ತು ರಹಸ್ಯವಾಗಿಯೂ ಸಮಜಾಯಿಸಿದೆನು-


10فَقُلْتُ اسْتَغْفِرُوا رَبَّكُمْ إِنَّهُ كَانَ غَفَّارًا

ನಾನು (ಹೀಗೆ) ಹೇಳಿದೆನು: ನಿಮ್ಮ ಪ್ರಭುವಿನೊಡನೆ ಕ್ಷಮಾಯಾಚನೆ ಮಾಡಿರಿ. ಖಂಡಿತವಾಗಿಯೂ ಅವನು ಮಹಾಕ್ಷಮಾಶೀಲನಾಗಿದ್ದಾನೆ-