1 إِذَا زُلْزِلَتِ الْأَرْضُ زِلْزَالَهَا

ಭೂಮಿಯು ತನ್ನ ಸಂಪೂರ್ಣ ಉಗ್ರತೆ ಯೊಂದಿಗೆ ಕುಲುಕಲ್ಪಡುವಾಗ,


2وَأَخْرَجَتِ الْأَرْضُ أَثْقَالَهَا

ಭೂಮಿಯು ತನ್ನೊಳಗಿನ ಸಕಲ ಹೊರೆಗಳನ್ನೂ ಹೊರ ಹಾಕಿ ಬಿಡುವಾಗ-


3وَقَالَ الْإِنْسَانُ مَا لَهَا

ಮತ್ತು ಮನುಷ್ಯನು 'ಇದಕ್ಕೇನಾಗುತ್ತಿದೆ?' ಎನ್ನುವಾಗ,


4يَوْمَئِذٍ تُحَدِّثُ أَخْبَارَهَا

ಅಂದು ಅದು ತನ್ನ (ಮೇಲೆ ಗತಿಸಿದ) ಸ್ಥಿತಿಗತಿಗಳನ್ನು ವಿವರಿಸುವುದು-


5بِأَنَّ رَبَّكَ أَوْحَىٰ لَهَا

ಏಕೆಂದರೆ ನಿನ್ನ ಪ್ರಭು ಅದಕ್ಕೆ (ಹಾಗೆ ಮಾಡಬೇಕೆಂದು) ಅಪ್ಪಣೆ ಕೊಟ್ಟಿರುವನು.


6يَوْمَئِذٍ يَصْدُرُ النَّاسُ أَشْتَاتًا لِيُرَوْا أَعْمَالَهُمْ

ಅಂದು ಜನರು ವಿಭಿನ್ನ ಸ್ಥಿತಿಗಳಲ್ಲಿ ಮರಳುವರು.(ಇದು) ಅವರ ಕರ್ಮಗಳು ಅವರಿಗೆ ತೋರಿಸಲ್ಪಡಲಿಕ್ಕಾಗಿ,


7فَمَنْ يَعْمَلْ مِثْقَالَ ذَرَّةٍ خَيْرًا يَرَهُ

ತರುವಾಯ ಅಣು ಗಾತ್ರದಷ್ಟು ಪುಣ್ಯ ಕಾರ್ಯವೆಸಗಿದವನು ಅದನ್ನು ಕಂಡೇ ತೀರುವನು.


8وَمَنْ يَعْمَلْ مِثْقَالَ ذَرَّةٍ شَرًّا يَرَهُ

ಮತ್ತು ಅಣು ಗಾತ್ರದಷ್ಟು ಪಾಪ ಕಾರ್ಯವೆಸಗಿದವನು ಅದನ್ನು ಕಂಡೇ ತೀರುವನು.